- Advertisement -
- Advertisement -
ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ತಮಿಳುನಾಡಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23- 25ರವರೆಗೆ ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಸಹಪಾಠಿಗಳು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement -