Wednesday, September 23, 2026
spot_imgspot_img
spot_imgspot_img

ಸೆ.28–30 ಬ್ಯಾಂಕ್ ಮುಷ್ಕರ ಹಿನ್ನೆಲೆ: ಸೆ.27 ಭಾನುವಾರ ಬ್ಯಾಂಕಿಂಗ್ ಸೇವೆ ಲಭ್ಯ

- Advertisement -
- Advertisement -

ನವದೆಹಲಿ: ಸೆ.28ರಿಂದ 30ರವರೆಗೆ ಮೂರು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರ ಬ್ಯಾಂಕ್ ಕಾರ್ಯನಿರ್ವಹಿಸಲಿವೆ.

ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಸೆ.28 ರಿಂದ 30ರವರೆಗೆ ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮತ್ತು ಅದಕ್ಕೂ ಮುನ್ನ ಬರುವ ಸೆ.26 ಹಾಗೂ 27ರ ವಾರಾಂತ್ಯದ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡು ಜನರ ಬ್ಯಾಂಕಿಂಗ್ ಅಗತ್ಯತೆಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.

ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ದೀರ್ಘಕಾಲದವರೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೆಪ್ಟೆಂಬರ್ 27ರ ಭಾನುವಾರದಂದು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಜೊತೆಗೆ ಎಲ್ಲಾ ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂ-ಸಂಯೋಜಿತ ಶಾಖೆಗಳು ಮತ್ತು ಕರೆನ್ಸಿ ಚೆಸ್ಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!