Sunday, May 5, 2024
spot_imgspot_img
spot_imgspot_img

ರಾಜ ಮಹಾರಾಜ ಜೋಡುಕರೆ ಕಂಬಳದ ಸಂಜೆಯ ಸಭಾ ಕಾರ್ಯಕ್ರಮದ ಉದ್ಘಾಟನೆ – ಸಿ.ಎಮ್‌. ಸಿದ್ದರಾಮಯ್ಯ

- Advertisement -G L Acharya panikkar
- Advertisement -

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಸೇರಿದಂತೆ ಹಲವು ಗಣ್ಯರು ಭಾಗಿ

ರಾಜ ಮಹಾರಾಜ ಜೋಡುಕರೆ ಕಂಬಳದ ಪುನೀತ್‌ ರಾಜ್‌ಕುಮಾರ್‌ ವೇದಿಕೆಯಲ್ಲಿ ನಿನ್ನೆ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಸಿ.ಎಮ್‌. ಸಿದ್ದರಾಮಯ್ಯ ನವರು ಉದ್ಘಾಟನೆ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು. ಕ್ರೀಡೆ ಪ್ರೋತ್ಸಾಹಿಸುವ ಅವಕಾಶ ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಕ್ರೀಡೆ ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಜನ ಬಂದು ನೋಡುವ , ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದರು.

ಮನರಂಜನೆಯ ಕ್ರೀಡೆ ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ. ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆ ಯಾಗುತ್ತದೆ ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು ಇದಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವೇದಿಕೆಯಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಸೇರಿದಂತೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಬಿ.ಆರ್‌. ಶೆಟ್ಟಿ, ಮಂಜುನಾಥ್‌ ಭಂಡಾರಿ, SCDCC ಬ್ಯಾಂಕ್‌ ಅಧ್ಯಕ್ಷ ಡಾ/ ಎಂ.ಎಸ್‌. ರಾಜೇಂದ್ರ ಕುಮಾರ್‌, ಆಭರಣ್‌ ಜ್ಯುವೆಲರ್‍ಸ್‌ನ ಪ್ರಕಾಶ್‌ ಕಾಮತ್‌, ಶಕುಂತಲಾ ಶೆಟ್ಟಿ , ಮಿಥುನ್‌ ರೈ ಮಂಗಳೂರು , ಉದಯ ಶೆಟ್ಟಿ ಮುನಿಯಾಲು, ಬೆಳಪು ದೇವಿಪ್ರಸಾದ್‌ ಶೆಟ್ಟಿ, ಹೇಮನಾಥ ಶೆಟ್ಟಿ ಕಾವು, ,ಬಿ.ಗುಣರಂಜನ್‌ ಶೆಟ್ಟಿ, ಗುರುಕಿರಣ್‌, ಉಮೇಶ್‌ ಶೆಟ್ಟಿ, ನಟಿ ಪ್ರಿಯಾಂಕ ಉಪೇಂದ್ರ, ನಟಿ ಅನುಷ್ಕಾ ಶೆಟ್ಟಿಯವರ ತಂದೆ ನಡುಮೊಗರು ಗುತ್ತು ವಿಠ್ಠಲ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

- Advertisement -

Related news

error: Content is protected !!