Monday, June 22, 2026
spot_imgspot_img
spot_imgspot_img

ಬಿ.ಸಿ.ರೋಡ್ : ಮುಸ್ಲಿಂ ಸಮಾಜ ಬಂಟ್ವಾಳ ಇದರ ನೂತನ ಕಚೇರಿ ಉದ್ಘಾಟನೆ

- Advertisement -
- Advertisement -

ಬಿ.ಸಿ.ರೋಡ್ : ಮುಸ್ಲಿಂ ಸಮಾಜ ಬಂಟ್ವಾಳ ಇದರ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭವು ಬಿ.ಸಿ.ರೋಡ್ ಕೈಕಂಬದ ವಿಶಾಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ನೂತನ ಕಛೇರಿಯನ್ನು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಬಂಟ್ವಾಳ ಮುಸ್ಲಿಂ ಸಮಾಜದ ಗೌರವಾಧ್ಯಕ್ಷ ಹಾಜಿ ಬಿ.ಎಚ್. ಖಾದರ್ ಬಂಟ್ವಾಳ ಉದ್ಘಾಟಿಸಿದರು. ಮುಸ್ಲಿಂ ಸಮಾಜದ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್ ಅಧ್ಯಕ್ಷತೆ ವಹಿಸಿದ್ದರು.
ಮಿತ್ತಬೈಲ್‌ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಅಶ್ರಫ್‌ ಫೈಝಿ ದು:ಹಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್ ಮುಹಮ್ಮದ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಬ್ಯಾರಿ ಸಾಹಿತ್ಯ ಪರಿಷತ್ ಮಾಜಿ ಸದಸ್ಯರ ಪಿ.ಎ ರಹೀಮ್, ರೆಸ್ಕೂ ಫೌಂಡೇಶನ್ ಅದ್ಯಕ್ಷ ಅಬ್ದುಲ್ ಜಬ್ಬಾರ್ ಮಾರಿಪಳ್ಳ, ನ್ಯಾಯವಾದಿ ಇಮ್ತಿಯಾಝ್ ಅಹ್ಮದ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಮಾಣಿ ಸೋಶಿಯಲ್ ಇಖ್ಯಾ ಫೆಡರೇಶನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸುಲ್ತಾನ್ ಶುಭ ಹಾರೈಸಿದರು.

ಮುಸ್ಲಿಂ ಸಮಾಜದ ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ ಪ್ರಸ್ತಾವನೆಗೈದರು, ಬಿ.ಎ.ಮುಹಮ್ಮದ್ ನೀಮಾ ಬಂಟ್ವಾಳ ಸ್ವಾಗತಿಸಿ, ನಿಕಟಪೂರ್ವ ಅಧ್ಯಕ್ಷ ಅಬ್ಬಾಸ್ ಸುನೈನಾ ವಂದಿಸಿದರು. ಮುಸ್ತಾಕ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!