Tuesday, April 30, 2024
spot_imgspot_img
spot_imgspot_img

ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

- Advertisement -G L Acharya panikkar
- Advertisement -
vtv vitla

ವಿಟ್ಲ: ಶಿಸ್ತು ಬದ್ಧವಾದ, ಸಂಸ್ಕಾರವಂತ ವಿದ್ಯಾರ್ಥಿಗಳು ಹಾಗೂ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸಂಸ್ಥೆಯ ಆಸ್ತಿಯಾಗಿದ್ದು, ಇದರ ಮೂಲಕ ಉತ್ತುಂಗದತ್ತ ಸಾಗಬಹುದು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಪರಿಪೂರ್ಣತೆಯನ್ನು ಪಡೆಯಲು ಸಾಧ್ಯ ಎಂದು ವಿಟ್ಲ ಜೇಸೀ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಜಯರಾಮ ರೈ ಹೇಳಿದರು.

ಅವರು ವಿಟ್ಲ ಸುವರ್ಣ ರಂಗಮಂದಿರದಲ್ಲಿ ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ 2023-24ರ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕ ಉದಯ ನಾಯಕ್ ನೂತನ ವಿದ್ಯಾರ್ಥಿಗಳಿಗೆ ನೀತಿ ನಿಯಮ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ಟ ವಹಿಸಿದ್ದರು.

ವಿಠಲ ಎಜ್ಯುಕೇಶನ್ ಸೊಸೈಟಿ ಸಂಚಾಲಕ ಎಲ್. ಎನ್. ಕೂಡೂರು, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ಶಿವರಾಮ ಭಟ್ ದೇವಸ್ಯ, ಸದಾಶಿವ ಬನ, ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ನಾಯಕ ದ್ವಿತೀಯ ವಿಜ್ಞಾನ ವಿಭಾಗ ಆಶ್ಲೇಷ್, ಉಪಾಧ್ಯಕ್ಷ ಪ್ರಥಮ ವಿಜ್ಞಾನ ವಿಭಾಗ ಪ್ರಿತೇಶ್, ಕಾರ್ಯದರ್ಶಿ ದ್ವಿತೀಯ ವಿಜ್ಞಾನ ವಿಭಾಗ ಪ್ರಣತಿ, ಜತೆಕಾರ್ಯದರ್ಶಿ ಪ್ರಥಮ ವಿಜ್ಞಾನ ವಿಭಾಗ ಲತಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ನಾಯಕ್ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕಿ ರೂಪಾಶ್ರೀ, ಶಿಕ್ಷಕಿ ಜ್ಯೋತಿ ಸನ್ಮಾನಿತರ ಪಟ್ಟಿ ಓದಿದರು. ಉಪನ್ಯಾಸಕಿ ಜಲಜಾಕ್ಷಿ ವಂದಿಸಿದರು. ಉಪನ್ಯಾಸಕಿ ಅರುಣಾ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!