Saturday, August 15, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ; 80 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ಶ್ರೀ ಕರುಣಾಕರ ನಾಯ್ತೊಟ್ಟುರವರು ಭಾರತದ ತ್ರಿವರ್ಣಧ್ವಜ ಹಾರಿಸಿ ಸ್ವಾತಂತ್ರ್ಯದ ಸಂದೇಶ ನೀಡಿದರು.

ನಂತರ ಜಾಗತಿಕ ತಾಪಮಾನ ಕಡಿಮೆ ಮಾಡುವ ಸಲುವಾಗಿ ಮನೆಗೊಂದು ಗಿಡ ನೆಡುವ ಆಶಯದಲ್ಲಿ ವಿಟ್ಲ ಪಟ್ಟಣ ಪಂಚಾಯಿತಿಯ ಸದಸ್ಯರು ಮತ್ತು ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗೆ ಗಿಡ ವಿತರಿಸಲಾಯ್ತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಸಂಗೀತ ಪಾಣೆಮಜಲು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ಕರುಣಾಕರ ವಿ ರವರು ಶುಭಾಶಯ ಕೋರಿದರು.

ವಿಟ್ಲ ಪಟ್ಟಣ ಪಂಚಾಯಿತಿಯ ಸದಸ್ಯರು, ಸಿಬ್ಬಂದಿಗಳು, ಪೌರಕಾರ್ಮಿಕರು ಭಾಗವಹಿಸಿದ್ದರು. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಷ್ಟ ಗೀತೆ, ಧ್ವಜಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಚಂದ್ರಶೇಖರ ವರ್ಮ ಸ್ವಾಗತಿಸಿ ವಂದಿಸಿದರು.

- Advertisement -

Related news

error: Content is protected !!