




ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿ ಅವರು ಧ್ವಜಾರೋಹಣಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅವರು “ದೇಶವನ್ನು ಪೂಜಿಸಿ ಉತ್ತಮ ನಾಗರಿಕರಾಗಿ ಮತ್ತು ಸಮರ್ಥ ನಾಯಕರಾಗಿ” ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಿ.ಎಸ್.ಎಫ್.ಹವಾಲ್ದಾರ ಭಾಸ್ಕರಗೌಡರವರು ಸ್ವತಂತ್ರ ಭಾರತಕ್ಕೆ ಇಂದು 79ರ ಸಂಭ್ರಮ , ವಿಶ್ವಗುರುವಾಗಿ ಭಾರತ ಇನ್ನಷ್ಟು ಎತ್ತರಕ್ಕೆ ಇರಲಿ.. ಸಮರ್ಥ ನಾಯಕನ ಆಯ್ಕೆಯ ಜವಾಬ್ದಾರಿಯೂ ಕೂಡ ದೇಶಭಕ್ತಿಯೇ ಆಗಿದೆ ಎನ್ನುತ್ತಾ ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದರು.
ಶಾಲಾ ವಿದ್ಯಾರ್ಥಿ ನಾಯಕ ಮೋನಿಷ್.ಎಲ್ ಇವರು ವಿದ್ಯಾರ್ಥಿ ಪ್ರತಿನಿಧಿಯಾಗಿ ಈ ಸಂದರ್ಭದಲ್ಲಿ ಮಾತನಾಡಿದರು. ಕಾಯಕವೇ ಕೈಲಾಸ ಎನ್ನುವಂತೆ ಆಹರ್ನಿಷಿ ದುಡಿಯುತ್ತಿರುವ ವಿಟ್ಲ ಪಟ್ಟಣ ಪಂಚಾಯಿತಿನ ಎಲ್ಲಾ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮೋಹನ ಎ , ಸಂಸ್ಥೆಯ ಆಡಳಿತ ಅಧಿಕಾರಿ ರಾಧಾಕೃಷ್ಣ ಎರುಂಬು, ಪ್ರಾಂಶುಪಾಲ ಜಯರಾಮ ರೈ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಎಲ್ಲಾ ಶಿಕ್ಷಕ ಶಿಕ್ಷಕೇತರರು , ವಿದ್ಯಾರ್ಥಿಗಳು ಹಾಗೂ ಹೆತ್ತವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು .ಶಾಲೆಯ ಸಾಂಸ್ಕೃತಿಕ ವಿಭಾಗದ ಅಂಗವಾದ ” ಅಂಕುರ” ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಏಳನೇ ತರಗತಿಯ ವಿದ್ಯಾರ್ಥಿನಿಯರಾದ ಪಾವ್ನಿ ಜೆ.ವಿ.ಮತ್ತು ಮನೋಜ್ಞ ಜಗದೀಶ್ ನಿರೂಪಿಸಿದರು. ಪೃತ್ವಿಕ್ ಡಿ.ಟಿ ಮತ್ತು ಪ್ರತಿಜ್ಞಾ ಇವರು ವಿಜೇತರುಗಳ ಹೆಸರುಗಳನ್ನು ಓದಿದರು. ಕುಮಾರಿ ಖದಿಜತ್ ಜಝೀಲ ಸ್ವಾಗತಿಸಿದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕುಮಾರಿ ಶಾನ್ವಿ ವಂದಿಸಿದರು. ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಶಿಕ್ಷಕಿಯರಾದ ರೇಖಾ, ಸೆಲೆಸ್ಟಿನ್ ಪಿಂಟೊ ಮತ್ತು ಮಾನಸ.ಕೆ. ಎಸ್ .ಸಹಕರಿಸಿದರು.








