- Advertisement -
- Advertisement -




ಕಂಬಳಬೆಟ್ಟು: ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ-ಕಂಬಳಬೆಟ್ಟು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇವಸ್ಯ ಜಂಕ್ಷನ್ ಬಳಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು.
ಭೂಸೇನೆಯ ನಿವೃತ್ತ ಯೋಧ ಕ್ಯಾಪ್ಟನ್. ಧನಂಜಯ ನಾಯ್ತೋಟ್ಟು ಇವರು ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿಕೊಟ್ಟರು.
ಸಿದ್ದಿವಿನಾಯಕ ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಾಲ್ಕು ಆಸಕ್ತ ಕುಟುಂಬಕ್ಕೆ ಆಹಾರ ಸಾಮಗ್ರಿಯ ಕಿಟ್ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಿದ್ದಿವಿನಾಯಕ ಮಂಡಲದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
- Advertisement -








