- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗುತ್ತಿದೆ. ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 62,538 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 20,27,074ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ಒಂದೇ ದಿನ 886 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 41,585ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟಾರೆ ಶೇ.67ರಷ್ಟು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 13,78,105 ಮಂದಿ ಗುಣಮುಖರಾಗಿದ್ದಾರೆ. 6,07,384 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -