Sunday, June 28, 2026
spot_imgspot_img
spot_imgspot_img

‘ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ’ – ಶೇಖ್‌ ಹಸೀನಾ

- Advertisement -
- Advertisement -

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಎನ್‌ಡಿಟಿವಿಗೆ ವಿಶೇಷ ಸಂದರ್ಶನ ನೀಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಮತ್ತು ತಮ್ಮ ಅವಾಮಿ ಲೀಗ್ ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಲು ಶೀಘ್ರದಲ್ಲೇ ಮರಳುವುದಾಗಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ತಮಗೆ ಎದುರಾದ ಪರಿಸ್ಥಿತಿಯ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಮತ್ತು ವ್ಯವಸ್ಥಿತ ರಾಜಕೀಯ ಪಿತೂರಿ ಇತ್ತು ಎಂದು ಹಸೀನಾ ಪುನರುಚ್ಚರಿಸಿದ್ದಾರೆ. ದೇಶದಲ್ಲಿ ಶಾಂತಿ ಕದಡಲು ಹವಣಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ತಾವು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.

ಕಠಿಣ ಪರಿಸ್ಥಿತಿಯಲ್ಲಿ ತಮಗೆ ಆಶ್ರಯ ನೀಡಿ ರಕ್ಷಿಸಿದ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಐತಿಹಾಸಿಕ ಬಾಂಧವ್ಯ ಎಂದಿಗೂ ಮುರಿಯಲಾರದ್ದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಬಾಂಗ್ಲಾದೇಶವನ್ನು ಮುನ್ನಡೆಸುತ್ತಿರುವ ಮಧ್ಯಂತರ ಸರ್ಕಾರವು ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿರುವ ಅವರು, ತಕ್ಷಣವೇ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆದ ಭಾರಿ ರಾಜಕೀಯ ದ್ರೋಹ ಮತ್ತು ವಿದ್ಯಾರ್ಥಿ ದಂಗೆಯ ಬಳಿಕ ದೇಶ ತೊರೆದು ಶೇಖ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

- Advertisement -

Related news

error: Content is protected !!