Thursday, May 2, 2024
spot_imgspot_img
spot_imgspot_img

ಭಾರತದಲ್ಲಿಂದು 3,66,161 ಹೊಸ ಕೋವಿಡ್ ಪ್ರಕರಣಗಳು ಪತ್ತೆ!

- Advertisement -G L Acharya panikkar
- Advertisement -

ನವದೆಹಲಿ: ಭಾರತದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 3,66,161 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,754 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 3,66,161 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 3,754 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ 2,46,116ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,45,237ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,53,818 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,86,71,222ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 14,74,606 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 30,37,50,077 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 17,01,76,603 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!