- Advertisement -
- Advertisement -
ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 4,12,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,980 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 23,01,68ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 35,66,398 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,72,80,844 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,29,113 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 16,25,13,339 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


- Advertisement -








