- Advertisement -
- Advertisement -





ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ನೀರಾಂಬೃತ ಯೋಜನೆಯ ಮೂಲಕ ಕೃಷಿ ಕಾರ್ಮಿಕರಿಗೆ ತೆಂಗಿನ ಮರ ಹತ್ತುವ ಉಪಕರಣಗಳನ್ನು ಮಾಣಿ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ಹಾಗೂ ಮಾಜಿ ಅಧ್ಯಕ್ಷ ಮತ್ತು ಸದಸ್ಯರ ಸಮ್ಮುಖದಲ್ಲಿ ಕೃಷಿ ಸಖಿಗಳ ಸೂಚನೆ ಮೇರೆಗೆ ಆರು ಕೃಷಿ ಕಾರ್ಮಿಕರಿಗೆ ಸಂಸ್ಥೆಯಿಂದ ಉಚಿತವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಇಬ್ರಾಹಿಂ ಕೆ ಮಾಣಿ ನಾರಾಯಣಶೆಟ್ಟಿ ತೋಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಎಂ ಬಿ ಕೆ ಲೈಲಾ ಕೃಷಿ ಸಖಿ ಕವಿತಾ ಪಶು ಸಖಿ ಚೈತ್ರ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Advertisement -








