Friday, March 29, 2024
spot_imgspot_img
spot_imgspot_img

ಭಾರತ ಮತ್ತು ಬ್ರಿಟನ್ ಸಂಬಂಧ ಇನ್ನಷ್ಟು ಗಟ್ಟಿಗೊಳಿಸಲಿದ್ದೇವೆ -ಡೊಮಿನಿಕ್ ರಾಬ್

- Advertisement -G L Acharya panikkar
- Advertisement -

ನವದೆಹಲಿ: ಭಾರತ ಪ್ರವಾಸದಲ್ಲಿರುವ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ವ್ಯಾಪಾರ, ರಕ್ಷಣಾ, ಶಿಕ್ಷಣ, ಪರಿಸರ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಟನ್​ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್​ ರಾಬ್​ ಬ್ರೆಕ್ಸಿಟ್‌ನ ಬಳಿಕ ಬ್ರಿಟನ್‌, ಆರ್ಥಿಕತೆಯಲ್ಲಿ ಮುನ್ನಡೆ ಸಾಧಿಸುತ್ತಿರುವ ಭಾರತದಂತಹ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಇನ್ನಷ್ಟು ವೃದ್ಧಿಸಲು ಉತ್ಸುಕವಾಗಿದೆ. ನಾವು ರಕ್ಷಣೆ ಹಾಗೂ ಭದ್ರತೆಯ ವಿಷಯದಲ್ಲಿ ಭಾರತದೊಂದಿಗಿನ ಸಂಬಂಧವನ್ನ ಇನ್ನಷ್ಟು ಗಟ್ಟಿಗೊಳಿಸಲಿದ್ದೇವೆ ಎಂದಿದ್ದಾರೆ.

- Advertisement -

Related news

error: Content is protected !!