Thursday, June 18, 2026
spot_imgspot_img
spot_imgspot_img

ದೇಶದಲ್ಲಿ 31 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 31 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 61,408 ಮಂದಿಗೆ ಕೊರೊನಾ ತಗುಲಿದೆ. ಹೀಗಾಗಿ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 31,06,349ಕ್ಕೆ ಏರಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ ಒಂದು ದಿನದಲ್ಲಿ 836 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ಕೊರೊನಾಗೆ ಒಟ್ಟು 57,542 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 57,468 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 23,38,036 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 7,10,771 ಪ್ರಕರಣಗಳು ಸಕ್ರೀಯವಾಗಿವೆ ಎಂದು ಮಾಹಿತಿ ನೀಡಿದೆ.

- Advertisement -

Related news

error: Content is protected !!