- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಗಳಲ್ಲಿ 52,123 ಮಂದಿಗೆ ಕೊರೊನಾ ವಕ್ಕರಿಸಿದ್ದು ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿದೆ.
ಅಲ್ಲದೇ ಕೊರೊನಾ ಮರಣಮೃದಂಗ ಕೂಡ ನಿಂತಿಲ್ಲ. ಬುಧವಾರ ಒಂದೇ ದಿನ 775 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 34,968ಕ್ಕೆ ಏರಿಕೆಯಾಗಿದೆ.
ಇಲ್ಲಿಯವರೆಗೆ 10,20,582 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,28,242 ಕೇಸ್ ಗಳು ಸಕ್ರೀಯವಾಗಿದ್ದು, ಇವೆರೆಲ್ಲರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -