- Advertisement -
- Advertisement -
ವರದಿ:ನ್ಯೂಸ್ ಡೆಸ್ಕ್, ವಿ ಟಿವಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅಷ್ಟೇ ವೇಗದಲ್ಲಿ ಸೋಂಕಿತರು ಕೂಡ ಗುಣಮುಖರಾಗುತ್ತಿದ್ದಾರೆ. ಇಲ್ಲಿಯವರೆಗೆ 15,35,744 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 62,064 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ 1,007 ಮಂದಿ ಕೊರೊನಾ ಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 44,386ಕ್ಕೆ ಏರಿದೆ. ಇನ್ನು 6,34,945 ಪ್ರಕರಣಗಳು ಸಕ್ರೀಯವಾಗಿವೆ ಎಂದು ತಿಳಿಸಿದೆ.
- Advertisement -