Monday, May 20, 2024
spot_imgspot_img
spot_imgspot_img

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 57,117 ಮಂದಿಗೆ ಕೊರೊನಾ

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 57,117 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿದೆ.

ಒಂದೇ ದಿನ 764 ಮಂದಿ ಬಲಿ:
ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 764 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 36,511ಕ್ಕೆ ಏರಿದೆ.
ಈವರೆಗೆ 10,94,374 ಮಂದಿ ಕೊರೊನಾ ಗುಣಮುಖರಾಗಿದ್ದಾರೆ. 5,65,103 ಪ್ರಕರಣಗಳು ಸಕ್ರೀಯವಾಗಿವೆ ಎಂದು ಮಾಹಿತಿ ನೀಡಿದೆ.

- Advertisement -

Related news

error: Content is protected !!