Wednesday, August 12, 2026
spot_imgspot_img
spot_imgspot_img

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 55,079 ಮಂದಿಗೆ ಕೊರೊನಾ ಸೋಂಕು

- Advertisement -
- Advertisement -

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55,079 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಇಲ್ಲಿಯವರೆಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿದೆ. ಈ ಪೈಕಿ 6,73,166 ಪ್ರಕರಣಗಳು ಸಕ್ರೀಯವಾಗಿದ್ದು, 19,77,780 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

ಇನ್ನು ಕಳೆದ 24 ಗಂಟೆಯಲ್ಲಿ 876 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಇಲ್ಲಯವೆರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 50,921ಕ್ಕೆ ಏರಿದೆ ಎಂದು ತಿಳಿಸಿದೆ. ಇನ್ನು ಕಳೆದ 24 ಗಂಟೆಯಲ್ಲಿ 57,937 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

- Advertisement -

Related news

error: Content is protected !!