ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 48,513 ಮಂದಿಯ ಕೊರೊನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 15,31,669ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 768 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 34,193ಕ್ಕೆ ಏರಿಕೆಯಾಗಿದೆ.
ಇಲ್ಲಿತನಕ 9,88,029 ಮಂದಿ ಗುಣಮುಖರಾಗಿದ್ದು, 5,09,447 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
#CoronaVirusUpdates: #COVID19 India Tracker
— #IndiaFightsCorona (@COVIDNewsByMIB) July 29, 2020
(As on 29 July, 2020, 08:00 AM)
▶️ Confirmed cases: 1,531,669
▶️ Active cases: 509,447
▶️ Cured/Discharged/Migrated: 988,029
▶️ Deaths: 34,193#IndiaFightsCorona#StayHome #StaySafe @ICMRDELHI
Via @MoHFW_INDIA pic.twitter.com/PJq9H57rJe

ಜುಲೈ 28ರವರೆಗೆ 1,77,43,740 ಮಂದಿಯ ಗಂಟಲಿನ ದ್ರವದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಿನ್ನೆ ಒಂದೇ 4,08,855 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
