- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಕಳೆದ 24 ಗಂಟೆಯಲ್ಲಿ 29,429 ಮಂದಿಗೆ ಕೊರೊನಾ ತಗುಲಿದೆ. ಹೀಗಾಗಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,36,131ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇನ್ನು ನಿನ್ನೆ ಒಂದೇ ದಿನ 582 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 24,309ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಈವರೆಗೆ 5,92,031 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 3,19,840 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -