Thursday, April 18, 2024
spot_imgspot_img
spot_imgspot_img

ದೇಶದಲ್ಲಿ ಪ್ರತಿ ನಿಮಿಷಕ್ಕೆ 243 ಸೋಂಕಿತರು ಪತ್ತೆ!

- Advertisement -G L Acharya panikkar
- Advertisement -

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ದೇಶದಲ್ಲಿ ಪ್ರತಿದಿನದ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಭಾರತದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇ.16 ರಷ್ಟು ಹೆಚ್ಚಳವಾಗಿದ್ದು, ಪ್ರತಿ ನಿಮಿಷಕ್ಕೆ 243 ಸೋಂಕಿತರು ಪತ್ತೆಯಾಗುತ್ತಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಇಂದು ಒಂದೇ ದಿನ 3,52,991 ಪ್ರಕರಣಗಳು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ.

ಇನ್ನು ಒಂದೇ ದಿನ ಭಾರತದಲ್ಲಿ ಕೊರೊನಾಗೆ 2,812 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಮೃತರ ಸಂಖ್ಯೆ 1,95,123ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!