Tuesday, July 1, 2025
spot_imgspot_img
spot_imgspot_img

ಬಾಂಗ್ಲಾ ಸೇನೆಗೆ ಕುದುರೆ, ಶ್ವಾನಗಳನ್ನು ಉಡುಗೊರೆಯಾಗಿ ನೀಡಿದ ಭಾರತ

- Advertisement -
- Advertisement -

ನವದೆಹಲಿ(ನ.13): ಬಾಂಗ್ಲಾದೇಶ ಸೇನೆಗೆ 20 ಮಿಲಿಟರಿ ಕುದುರೆಗಳು ಹಾಗೂ 10 ಶ್ವಾನಗಳನ್ನು ಭಾರತೀಯ ಸೇನೆ ಉಡುಗೊರೆಯಾಗಿ ನೀಡಿದೆ.

ಭಾರತೀಯ ಸೇನೆ ಪಶುವೈದ್ಯಕೀಯ ಮತ್ತು ರಿಮೌಂಟ್ ದಳ ನೆಲಬಾಂಬ್‍ಗಳನ್ನು ಪತ್ತೆ ಹಚ್ಚುವ ತರಬೇತಿ ಪಡೆದಿರುವ 20 ಮಿಲಿಟರಿ ಕುದುರೆ ಮತ್ತು 10 ಶ್ವಾನಗಳನ್ನು ಬಾಂಗ್ಲಾದೇಶ ಸೈನ್ಯಕ್ಕೆ ಭಾರತೀಯ ಸೇನೆ ಉಡುಗೊರೆಯಾಗಿ ನೀಡಿದೆ. ಕಳೆದ ವರ್ಷ ಭಾರತ 10 ಶ್ವಾನಗಳನ್ನು ಬಾಂಗ್ಲಾದೇಶಕ್ಕೆ ಉಡುಗೊರೆಯಾಗಿ ನೀಡಿತ್ತು.

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸ್ನೇಹ ಸೌಹಾರ್ದವೃದ್ಧಿಗೆ ಈ ಉಡುಗೊರೆ ಸಹಾಯಕಾರಿಯಾಗುತ್ತದೆ ಎಂದು ವಿಶ್ಲೇಷಿಸಲಾಗಿದೆ. ಪೆಟ್ರಾಫೋಲ್ ಬೆನಾಪೋಲ್ ಇಂಟಿಗ್ರೇಟೆಡ್ ಪೋಸ್ಟ್ ಬಳಿ ಬಾಂಗ್ಲಾದೇಶ ಸೇನೆಯ ನಿಯೋಗ ಭಾರತೀಯ ಸೇನೆಯಿಂದ ಈ ಉಡುಗೊರೆ ಸ್ವೀಕರಿಸಿದೆ. ಭಾರತೀಯ ಸೇನಾ ನಿಯೋಗವನ್ನು ಬ್ರಹ್ಮಾಸ್ತ್ರ ಕಾಪ್ಸ್ ಮುಖ್ಯಸ್ಥ ಮೇಜರ್ ಜನರಲ್ ನರಿಂದರ್ ಸಿಂಗ್ ಕ್ರೌಡ್ ನೇತೃತ್ವದಲ್ಲಿ ಕುದುರೆ ಮತ್ತು ಶ್ವಾನಗಳನ್ನು ಬಾಂಗ್ಲಾದೇಶ ಸೇನೆಗೆ ನೀಡಲಾಯಿತು.

ಬಾಂಗ್ಲಾದೇಶ ಸೇನಾ ನಿಯೋಗವನ್ನು ಜೆಸ್ಸೋರ್ ಮೂಲದ ವಿಭಾಗದ ಕಮಾಂಡಿಂಗ್ ಮಾಡುತ್ತಿರುವ ಮೇಜರ್ ಜನರಲ್ ಮೊಹಮ್ಮದ್ ಹುಮಾಯೂನ್ ಕಬೀರ್ ನೇತೃತ್ವ ವಹಿಸಿದ್ದರು.

- Advertisement -

Related news

error: Content is protected !!