Sunday, May 5, 2024
spot_imgspot_img
spot_imgspot_img

ಇಂಡಿಯಾ ವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ  ಸಾಧ್ಯತೆ

- Advertisement -G L Acharya panikkar
- Advertisement -

ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಇಂಡಿಯಾ ವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ  ಸಾಧ್ಯತೆಯಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಶೋತ್ತರ ಸಮಯ, ಶೂನ್ಯ ಸಮಯ ಮತ್ತು ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ.
ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟಿರುವುದರಿಂದ, ಇದು ಜನರಲ್ಲಿ ಅನಗತ್ಯ ಗೊಂದಲ ಮೂಡಿಸುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮುಂದಾಗಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಇದನ್ನು ನಿರ್ವಹಿಸಲಾಗುತ್ತದೆ.

- Advertisement -

Related news

error: Content is protected !!