Saturday, October 12, 2024
spot_imgspot_img
spot_imgspot_img

ದೇಶದಲ್ಲಿ 18 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ..!

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 52,972 ಮಂದಿಯ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 771 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.

ಈವರೆಗೆ ಸೋಂಕಿನಿಂದ 11,86,203 ಮಂದಿ ಗುಣಮುಖರಾಗಿದ್ದಾರೆ. 5,79,357 ಪ್ರಕರಣಗಳು ಇನ್ನೂ ಸಕ್ರೀಯವಾಗಿವೆ ಎಂದು ಮಾಹಿತಿ ನೀಡಿದೆ.

- Advertisement -

Related news

error: Content is protected !!