Tuesday, July 21, 2026
spot_imgspot_img
spot_imgspot_img

ಭಾರತಕ್ಕೆ ಆಗಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲ

- Advertisement -
- Advertisement -

ನವದೆಹಲಿ: ನಾಸಾದ ಗಗನಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ ಶುಭಾಂಶು ಶುಕ್ಲಾ ಇಂದು ನಸುಕಿನ ಹೊತ್ತು ಭಾರತಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಮ್ನಾಡಿಗೆ ಮರಳಿದ್ದು, ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.

ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತಿತರರು ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ಬಳಿಕ ತಮ್ಮ ತವರು ಲಕ್ಕೋಗೆ ಪ್ರಯಾಣಿಸುವ ಸಾಧ್ಯತೆ ಇದೆ.ಆಕ್ಸಿಯಂ-4 ಮಿಷನ್‌ಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಆಗಸ್ಟ್ 22-23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಹಿಂದಿರುಗುತ್ತಾರೆ ಎಂದು ಹೇಳಲಾಗಿದೆ.

ಐಎಸ್‌ಎಸ್‌ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರಳಿದ್ದರು. ಈ ಅವಧಿಯಲ್ಲಿ ಅವರು ಭಾರತಕ್ಕೆ ಸಂಬಂಧಿಸಿದ ಏಳು ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದಾರೆ. ಅವುಗಳನ್ನು ಈಗ ಭಾರತೀಯ ವಿಜ್ಞಾನಿಗಳು ಪರಿಶೀಲನೆಗಾಗಿ ಮರಳಿ ತರಲಾಗಿದ್ದು, ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ.

- Advertisement -

Related news

error: Content is protected !!