




ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆಯ ಯೋಧರು ಇಬ್ಬರು ಪಾಕ್ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿಯ ನಂತರ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಈ ಕಾರ್ಯಾಚರಣೆಯು ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿತು.
ಚಿನಾರ್ ಪೊಲೀಸ್-ಇಂಡಿಯನ್ ಆರ್ಮಿ ಎಕ್ಸ್ ಹ್ಯಾಂಡಲ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಯನ್ನು ದೃಢಪಡಿಸಿದೆ. “ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರಿ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ, ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದಿದೆ.
‘ಮಿನಿ ಸ್ವಿಟ್ಟರ್ ಲ್ಯಾಂಡ್’ ಎಂದೇ ಪ್ರಸಿದ್ಧವಾಗಿರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ಪಟ್ಟಣದ ಹುಲ್ಲುಗಾವಲು ಪ್ರದೇಶದಲ್ಲಿ ಭಯೋತ್ಪಾದಕರು ಕಂಡ ಕಂಡ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ಇಬ್ಬರು ಕನ್ನಡಿಗರು, ನೌಕಾಪಡೆ, ಗುಪ್ತಚರ ದಳ ಅಧಿಕಾರಿ ಸಾವನ್ನಪ್ಪಿದ್ದಾರೆ. 2019 ರಲ್ಲಿ ಪುಲ್ಟಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಯಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಈ ದಾಳಿಯ ಹೊಣೆ ಹೊತ್ತಿದೆ.