Saturday, June 28, 2025
spot_imgspot_img
spot_imgspot_img

ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

- Advertisement -
- Advertisement -

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ ಪ್ರಕಟಿಸಿದೆ.

ಆ್ಯಕ್ಸಿಯಂ-4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್ ನ ಫಾಲ್ಕನ್-9 ರಾಕೆಟ್ ಉಡಾವಣೆಗೊಳ್ಳಲಿದೆ ಎಂದು ನಾಸಾ ತಿಳಿಸಿದೆ.

ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ಪೇಸ್‌ಎಕ್ಸ್ ನ ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಕಳೆದ ವಾರ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆಯಾಗಿತ್ತು. ಈ ಕುರಿತು ಇಸ್ರೋ ತಂಡ ‘ಆ್ಯಕ್ಸಿಯಂ-4’ ಮತ್ತು ಸ್ಪೇಸ್ ಎಕ್ಸ್ ನ ತಜ್ಞರೊಂದಿಗೆ ಚರ್ಚೆ ನಡೆಸಿ, ಸೋರಿಕೆ ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆ ನಡೆಸಲು ನಿರ್ಧರಿಸಿತ್ತು.

- Advertisement -

Related news

error: Content is protected !!