Wednesday, May 1, 2024
spot_imgspot_img
spot_imgspot_img

ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಘೋಷಣೆ

- Advertisement -G L Acharya panikkar
- Advertisement -

ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ಹಂಚಿಕೊಂಡಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡಿತು. ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ ಎಂದೇ ಜನಪ್ರಿಯರು ಅಡ್ವಾಣಿಯವರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಣೆ ಮಾಡಿರುವುದು ಇಲ್ಲಿ ಪ್ರಮುಖ ವಿಚಾರವಾಗಿದೆ.

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪ ಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.

- Advertisement -

Related news

error: Content is protected !!