Thursday, July 23, 2026
spot_imgspot_img
spot_imgspot_img

ಇಂಡಿಗೋ ವಿಮಾನ ಇಂಡಿಗೋ ವಿಮಾನ ವಿಳಂಬ ಮತ್ತು ರದ್ದತಿಯಿಂದಾಗಿ ಪರಿಸ್ಥಿತಿ ಸುಧಾರಿಸುತ್ತಿದೆ..!

- Advertisement -
- Advertisement -

ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಾಯುವ ಅಗತ್ಯ ಇರುವುದಿಲ್ಲ- ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು

ಇಂಡಿಗೋ ವಿಮಾನ ವಿಳಂಬ ಮತ್ತು ರದ್ದತಿಯಿಂದಾಗಿ ಪರಿಸ್ಥಿತಿ ಸುಧಾರಿಸುತ್ತಿದ್ದು, ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಾಯುವ ಅಗತ್ಯ ಇರುವುದಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಹೇಳಿದ್ದಾರೆ.

ಈ ಅಡಚಣೆಯನ್ನು ಪರಿಶೀಲಿಸಲು ಮತ್ತು ಎಲ್ಲಿ ತಪ್ಪು ಆಗಿದೆ ಎಂಬುದನ್ನು ತಿಳಿಯಲು ಸಮಿತಿಯನ್ನು ರಚಿಸಲಾಗಿದೆ. ಸರ್ಕಾರದ ತಕ್ಷಣದ ಆದ್ಯತೆ ವಿಮಾನ ಸಂಚಾರ ಸಹಜ ಸ್ಥಿತಿಗೆ ಮರಳುವುದು ಮತ್ತು ಪ್ರಯಾಣಿಕರಿಗೆ ಎಲ್ಲಾ ಬೆಂಬಲವನ್ನು ಒದಗಿಸುವುದು ಎಂದು ತಿಳಿಸಿದ್ದಾರೆ.

ಪರಿಸ್ಥಿತಿ ಸುಧಾರಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಕಳೆದ ಎರಡು ದಿನಗಳಿಂದ ಇದ್ದ ಬಾಕಿ ಉಳಿದಿರುವ ಸಮಸ್ಯೆಗಳನ್ನು ನಿವಾರಿಸಲಾಗಿದೆ. ನಾಳೆಯಿಂದ, ಯಾವುದೇ ದಟ್ಟಣೆ ಇರುವುದಿಲ್ಲ. ವಿಮಾನ ನಿಲ್ದಾಣಗಳಲ್ಲಿ ಯಾವುದೇ ಕಾಯುವಿಕೆ ಇರುವುದಿಲ್ಲ. ಎಲ್ಲವೂ ಸಹಜ ಸ್ಥಿತಿಗೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

ಯಾರು ತಪ್ಪು ಮಾಡಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ನಡೆಯಲಿದೆ. ಅದರ ಬಗ್ಗೆಯೂ ನಾವು ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ. ಸಮಸ್ಯೆಗೆ ಕಾರಣರಾದವರು ದಂಡ ತೆರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!