
ಉತ್ತರ ಪ್ರದೇಶ: ಸ್ವಾತಂತ್ರ್ಯೋತ್ಸವ ಇನ್ನೇನು ಸಮೀಪಸುತ್ತಿದೆ. ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ, ದೇಶಾದ್ಯಂತ ಭಾರೀ ಸಿದ್ಧತೆಗಳು ನಡೆಯುತ್ತಿವೆ. ಇದೇ ವೇಳೆ ಅದೆಷ್ಟೋ ಮಕ್ಕಳು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ರ ಪಾತ್ರ ಮಾಡೋದಕ್ಕೆ ಕಾತುರದಿಂದ ಕಾಯ್ತಿದ್ದಾರೆ. ಇಂಥ ಸಮಯದಲ್ಲಿ, ಉತ್ತರ ಪ್ರದೇಶದ ಹಳ್ಳಿಯೊಂದಲ್ಲಿ ಬಾಲಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ನೇಣಿಗೆ ಹಾಕುವ ದೃಶ್ಯ ಅಭ್ಯಾಸ ಮಾಡುವಾಗ ಆಕಸ್ಮಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಉತ್ತರ ಪ್ರದೇಶದ ಬಡೌನ್ ಹಳ್ಳಿಯ 10 ವರ್ಷದ ಬಾಲಕ ಶಿವಂ, ನಾಟದಲ್ಲಿ ಭಗತ್ ಸಿಂಗ್ರನ್ನ ನೇಣಿಗೆ ಹಾಕುವ ದೃಶ್ಯವನ್ನ ಅಭ್ಯಾಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ನಡೆದ ತಕ್ಷಣ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡದೆ ಶವವನ್ನು ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ.
ಭಗತ್ ಸಿಂಗ್ ನನ್ನು ಗಲ್ಲಿಗೇರಿಸುವ ದೃಶ್ಯವನ್ನು ಪುನಃ ಪ್ರದರ್ಶಿಸುವಾಗ ಶಿವಂ ಕುತ್ತಿಗೆಗೆ ಕುಣಿಕೆಯನ್ನು ಕಟ್ಟಿದ್ದಾನೆ. ಆದರೆ ಅವನು ನಿಂತಿದ್ದ ಸ್ಟೂಲ್ ಜಾರಿಹೋಗಿದೆ. ಹೀಗಾಗಿ, ಆತ ಅಕಸ್ಮಾತಾಗಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.




