Saturday, May 4, 2024
spot_imgspot_img
spot_imgspot_img

ವಿಟ್ಲ ಹೊರೈಝನ್ ಶಾಲೆಯಲ್ಲಿ ಮಾದಕ ದ್ರವ್ಯ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಗಾರ

- Advertisement -G L Acharya panikkar
- Advertisement -

ವಿಟ್ಲ : ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ 8,‌ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಮ್ ಜಾಗೃತಿ, ಮಾದಕ ದ್ರವ್ಯ ತಡೆಗಟ್ಟುವಿಕೆ ಮತ್ತು ಮಕ್ಕಳ ಲೈಂಗಿಕ ದೌರ್ಜನ್ಯ ತಡೆ ಹಾಗೂ ಕಾಯ್ದೆ, ಪೋಕ್ಸೋ ಕಾಯ್ದೆ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ವಿಟ್ಲ ಠಾಣೆಯ ಆರಕ್ಷಕ ಅಧಿಕಾರಿ ಕಾರ್ತಿಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾವಹಿಸಿದ್ದರು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ‌ ಉತ್ಸಾಹದಿಂದ ಭಾಗವಹಿಸಿ, ಸಂಪನ್ಮೂಲ ವ್ಯಕ್ತಿಯೊಂದಿಗೆ ತಮ್ಮ ಪ್ರಶ್ನೆಗಳನ್ನು ಕೇಳುವುದರ ಮೂಲಕ ಸಂಶಯಗಳನ್ನು ಪರಿಹರಿಸಿಕೊಂಡರು.


ಪೊಲೀಸ್ ಸಿಬಂದಿ ಅಶೋಕ್, ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ಉಪಮುಖ್ಯ ಶಿಕ್ಷಕಿ ಗಾಯತ್ರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ನೋಟರಿ ಅಬೂಬಕರ್ ಸ್ವಾಗತಿಸಿದರು.

- Advertisement -

Related news

error: Content is protected !!