Monday, April 29, 2024
spot_imgspot_img
spot_imgspot_img

ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) ಲಿಖಿತ ಪರೀಕ್ಷೆ ಬಗ್ಗೆ ಮಾಹಿತಿ

- Advertisement -G L Acharya panikkar
- Advertisement -

ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್‌ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25-02-2024ರಂದು ಬೆಳಗ್ಗೆ 11.00 ರಿಂದ 12.30ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಅಂಕ್ ಅನ್ನು ಸಹ ಕಳುಹಿಸಲಾಗುವುದು. ಕರೆಪತ್ರಗಳನ್ನು ಡೌನ್‌ ಲೋಡ್ ಮಾಡಿಕೊಂಡು ಲಿಖಿತ ಪರೀಕ್ಷೆಗೆ ನಿಗದಿಪಡಿಸಿದ ದಿನಾಂಕದಂದು ಹಾಜರಾಗಬೇಕು.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರಗಳ ವಿವರ ಈ ಕೆಳಗಿನಂತಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ(ಡಿಗ್ರಿ) ಕಾಲೇಜು ಉಜಿರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಜಿ ಕಾಲೇಜು ಉಜಿರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐ.ಟಿ ಕಾಲೇಜು ಉಜಿರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಬಿ ಸ್ಕೂಲ್, ಉಜಿರೆ

ಅಭ್ಯರ್ಥಿಗಳು ಕಡ್ಡಾಯವಾಗಿ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು.
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:

  1. ಪುರುಷ ಮತ್ತು ತೃತೀಯಲಿಂಗ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್‌ಗಳು ಇರುವ ಶಟ್‌ಗಳನ್ನು ಧರಿಸತಕ್ಕದ್ದಲ್ಲ.
  2. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಗಳನ್ನು ಧರಿಸತಕ್ಕದ್ದಲ್ಲ.
  3. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
  4. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:

  1. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ. ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  2. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು /ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
  3. ಎತ್ತರವಾದ ಹಿಮ್ಮಡಿಯ ಶೂಗಳನ್ನು/ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಲಿ ಧರಿಸಬಾರದು. ತೆಳುವಾದ ಅಡಿ ಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  4. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)

ಎಂದು ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!