Friday, August 7, 2026
spot_imgspot_img
spot_imgspot_img

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮ

- Advertisement -
- Advertisement -

ಕನ್ಯಾನ, ಮಾ. 6: ವಿದ್ಯಾರ್ಥಿಗಳಲ್ಲಿ ಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಕುರಿತ ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಯಿತು.

ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದ ಶ್ರೀಮತಿ ಅನುಪಮ ಅವರು ಸಾಮಾಜಿಕ ಸಮಸ್ಯೆಗಳಾದ ವರದಕ್ಷಿಣೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ, ಹೆಣ್ಣು ಶಿಶು ಮತ್ತು ಭ್ರೂಣ ಹತ್ಯೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಹೆಣ್ಣುಮಕ್ಕಳ ರಕ್ಷಣೆಗಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಿ, ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ, ಶ್ರೀಮತಿ ಚೈತ್ರಾ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿ, ಶ್ರಾವಣ್ಯ ವಂದಿಸಿ, ಇಶ್ಮಿತಾ ನಿರೂಪಿಸಿ, ಚೇತನಾ ಮತ್ತು ಬಳಗ ಪ್ರಾರ್ಥಿಸಿದರು.

- Advertisement -

Related news

error: Content is protected !!