Sunday, July 19, 2026
spot_imgspot_img
spot_imgspot_img

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ

- Advertisement -
- Advertisement -

ಕನ್ಯಾನ: ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಮುಟ್ಟಿನ ನೈರ್ಮಲ್ಯ, ಮಹಿಳೆಯರ ಆರೋಗ್ಯ ಮತ್ತು ಪೋಷಣೆ‘ ಕುರಿತು ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿತ್ತು.ಕನ್ಯಾನ ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸೌಮ್ಯ ಎಸ್ ಕೆ ಅವರು ಮುಟ್ಟಿನ ಸ್ವಚ್ಛತೆ, ಅರೋಗ್ಯ ರಕ್ಷಣೆ ಹಾಗೂ ಪೋಷಣೆ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಲ್ಲಿ ಅರೋಗ್ಯ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ, ಶ್ರೀಮತಿ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿ, ಶ್ರಾವಣ್ಯ ವಂದಿಸಿ, ಇಶ್ಮಿತಾ ನಿರೂಪಿಸಿ, ಚೇತನಾ ಮತ್ತು ಬಳಗ ಪ್ರಾರ್ಥಿಸಿದರು.

- Advertisement -

Related news

error: Content is protected !!