Saturday, May 4, 2024
spot_imgspot_img
spot_imgspot_img

ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ: ಸಿಬ್ಬಂದಿ ವಜಾ

- Advertisement -G L Acharya panikkar
- Advertisement -

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ.

ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದ್ದು ಆ ನಂತರ ಈ ಕುರಿತು ವರದಿ ಮಾಡಿದ ಬಳಿಕ ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವಾಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೆಟ್ರೋ ಒಳಗೆ ರೈತನನ್ನು ಬಿಡದ ಭದ್ರತಾ ಮೇಲ್ವಿಚಾರಕನನ್ನು ಕೂಡಲೇ ವಜಾಗೊಳಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವಾಣ್ ಭರವಸೆ ನೀಡಿದ್ದಾರೆ.

ವ್ಯಕ್ತಿಯೊಬ್ಬ ತಲೆಯ ಮೇಲೆ ಬಟ್ಟೆಯ ಮೂಟೆಯೊಂದನ್ನು ಹೊತ್ತುಕೊಂಡು ಮೆಟ್ರೋ ನಿಲ್ದಾಣಕ್ಕೆ ಹೋಗಿದ್ದಾರೆ. ಈ ವೇಳೆತಪಾಸಣಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಆಗ ಅದನ್ನು ನೋಡಿದ ಸಹಪ್ರಯಾಣಿಕರೊಬ್ಬರು ಅವರನ್ನು ಯಾಕೆ ಒಳಗೆ ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿ ಅವರ ಬಟ್ಟೆ ಗಲೀಜಾಗಿದೆ, ಹೀಗಿದ್ದರೆ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಆ ಕಾರಣಕ್ಕಾಗಿ ಒಳಗೆ ಬಿಡಲಾಗುತ್ತಿಲ್ಲ ಎಂದು ಹೇಳಿದ್ದರು.

ಬಳಿಕ ಮೆಟ್ರೋದಲ್ಲಿ ಪ್ರಯಾಣಿಕರು ಓಡಾಡುವಾಗ ಯಾವ ಬಟ್ಟೆ ಧರಿಸಬೇಕು ಎಂದು ಎಲ್ಲಾದರೂ ನಿಯಮ ಇದೆಯಾ ಎಂದು ಪ್ರಶ್ನಿಸಿದ ಪ್ರಯಾಣಿಕರು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

Related news

error: Content is protected !!