- Advertisement -
- Advertisement -



ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ.
ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣವನ್ನು ಪಾವತಿಸಲಾಗಿದೆ.
ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ಈ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆಯನ್ನು ಅರಣ್ಯ ಇಲಾಖೆ ಮಾಡಿಸಿದೆ.
- Advertisement -








