Thursday, May 9, 2024
spot_imgspot_img
spot_imgspot_img

ಪುತ್ತೂರು: ಅಂತ‌ರ್ ರಾಜ್ಯ ಕಳ್ಳಿಯ ಬಂಧನ: 6 ರೂ ಲಕ್ಷ ಮೌಲ್ಯದ ಚಿನ್ನಾಭರಣ ವಶ

- Advertisement -G L Acharya panikkar
- Advertisement -

ಪುತ್ತೂರು: ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಯಂಬತ್ತೂ‌ರ್ ಜಿಲ್ಲೆ ಸೋಲವಂಪಳಯಂ, ಸಿಕ್ಕಲಂಪಳಯಂ ನಿವಾಸಿ ಈಶ್ವರಿ ಬಂಧಿತ ಆರೋಪಿ.

ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ರೇಷ್ಮಾಎನ್ ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳು ಕಳವು ಆದಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ ತಮಿಳುನಾಡು ಮೂಲದ ಅಂತ‌ರ್ ರಾಜ್ಯ ಕಳ್ಳಿ ಈಶ್ವರಿ (45) ಎಂಬವಳನ್ನು ವಶಕ್ಕೆ ಪಡೆದು, ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್‌, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ರವರು ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!