Thursday, May 16, 2024
spot_imgspot_img
spot_imgspot_img

ಅಂತರರಾಜ್ಯ ಪ್ರಯಾಣ ನಿರ್ಬಂಧಗಳನ್ನು ತೆರವುಗೊಳಿಸಿದ ರಾಜ್ಯ ಸರ್ಕಾರ.

- Advertisement -G L Acharya panikkar
- Advertisement -

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ.ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಅಂತರರಾಜ್ಯ ಪ್ರಯಾಣಿಕರಿಗೆ ನಿರ್ಬಂಧ ಸೇರಿದಂತೆ ಇನ್ನೂ ಹಲವು ನಿಯಂತ್ರಣ ನಿಯಮಗಳನ್ನು ಈ ಹಿಂದೆ ಜಾರಿಗೊಳಿಸಿತ್ತು.

ಆದರೆ ಇದೀಗ ಕೇಂದ್ರ, ರಾಜ್ಯ ಸರ್ಕಾರಗಳು ಈ ನಿಯಮಗಳನ್ನು ಸಡಿಲ ಮಾಡಲು ಆರಂಭಿಸಿದ್ದು,ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ -3 ಜಾರಿಗೊಳಿಸಿ ಹೊರಡಿಸಿದ ಮಾರ್ಗಸೂಚಿಯನ್ವಯ ವ್ಯಕ್ತಿಗಳ ಮತ್ತು ಸರಕುಗಳ ಅಂತರರಾಜ್ಯ ಚಲನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೇಳಿದ್ದು ಮಾರ್ಗಸೂಚಿಗಳನ್ನು ನೀಡಲಾಗಿದೆ.




1.ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಈ ಹಿಂದೆ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿತ್ತು .

2. ಹಾಗೇ ರಾಜ್ಯದ ಗಡಿ ಭಾಗ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರವೇಶ ಮಾಡುವ ವೇಳೆ ವೈದ್ಯಕೀಯ ತಪಾಸಣೆ ನಡೆಸಬೇಕಿತ್ತು.

3.ಜಿಲ್ಲಾ ಸ್ವೀಕಾರ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಬೇಕು.

4. ಪ್ರಯಾಣಿಕರ ವರ್ಗೀಕರಣ ಮಾಡಬೇಕು.

5.ಕೈಗಳಮೇಲೆ ಸೀಲ್ ಹಾಕೋದು ಹಾಗೂ 14 ದಿನ ಕ್ವಾರಂಟೈನ್ ಇವುಗಳನ್ನೆಲ್ಲಾ ಕೈ ಬಿಡಲಾಗಿದೆ.

ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರಬೇಕು.

1.ವೈದ್ಯಕೀಯ ಸಮಾಲೋಚನೆ ಪಡೆಯಬೇಕು. ಆಪ್ತಮಿತ್ರ 14410 ಸಹಾಯವಾಣಿಗೆ ಕರೆ ಮಾಡಬೇಕು. ಕಡ್ಡಾಯವಾಗಿ ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆ ರಾಜ್ಯಕ್ಕೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸುವ ವ್ಯಾಪಾರಿಗಳು, ವಿದ್ಯಾರ್ಥಿಗಳು, ಕಾರ್ಮಿಕರು, ಸಾರಿಗೆ ಮಧ್ಯಂತರ ಇತರರಿಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

ಇನ್ನು ಮುಂದೆ ರಾಜ್ಯದಲ್ಲಿ ಅಂತರರಾಜ್ಯ ಪ್ರಯಾಣಿಕರಿಗೆ ಯಾವುದೇ ನಿಬಂಧನೆಗಳು ಇರುವುದಿಲ್ಲ. ಸೋಂಕು ಹರಡದಂತೆ ಮುನ್ನೆಚ್ಚರಿಕೆ‌ಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅವರು ಕರ್ನಾಟಕದ ಒಳಕ್ಕೆ ಪ್ರವೇಶ ಪಡೆಯಬಹುದಾಗಿದೆ. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು, ಆಗಾಗ್ಗೆ ಸಾಬೂನಿನಿಂದ ಕೈ ತೊಳೆಯುವುದು, ಕೊರೋನಾ ಲಕ್ಷಣಗಳಿದ್ದರೆ ಸ್ವಯಂ ನಿರ್ಬಂಧ ಹೇರಿಕೊಳ್ಳುವಂತೆಯೂ ಹೊಸ ಮಾರ್ಗಸೂಚಿ‌ಯಲ್ಲಿ ತಿಳಿಸಲಾಗಿದೆ. 

- Advertisement -

Related news

error: Content is protected !!