Wednesday, November 6, 2024
spot_imgspot_img
spot_imgspot_img

*SPECIAL:-ವಿಶ್ವ-ಹುಲಿ-ದಿನಾಚರಣೆ*

- Advertisement -
- Advertisement -

ವಿಶ್ವ ಹುಲಿ ದಿನಾಚರಣೆಯಾಗಿದ್ದು, ನಮ್ಮ ರಾಷ್ಟ್ರೀಯ ಪ್ರಾಣಿಯಾದ ಹುಲಿಗಳ ಸಂಖ್ಯೆ ಭಾರತದಲ್ಲಿ ಎರಡನೇ ಅತಿಹೆಚ್ಚು ಹುಲಿಗಳಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯ ಪಾತ್ರವಾಗಿದೆ.ಹುಲಿಗಳ ಸಂಖ್ಯೆ ಅತಿಹೆಚ್ಚು ಇರುವುದು ನಮ್ಮ ಹೆಮ್ಮೆಯ ಸಂಗತಿಯಾಗಿದೆ.

 ಪ್ಯಾಂಥೆರಾ ವಂಶಕ್ಕೆ ಸೇರಿದ 4 ದೊಡ್ಡ ಬೆಕ್ಕುಗಳ ಪೈಕಿ ಹುಲಿ ಅತ್ಯಂತ ದೊಡ್ಡ ಪ್ರಾಣಿ. ದಕ್ಷಿಣ ಮತ್ತು ಪೂರ್ವ ಏಷ್ಯಾಗಳಲ್ಲಿ ವ್ಯಾಪಕವಾಗಿ ಕಾಣಬರುವ ಹುಲಿ ತನ್ನ ಆಹಾರವನ್ನು ಬೇಟೆಯಾಡಿ ಮಾಂಸ ಸಂಪಾದಿಸುವ ಪ್ರಾಣಿಗಳ ಗುಂಪಿಗೆ ಸೇರಿದೆ. ಹುಲಿಯು 4 ಮೀ. ವರೆಗೆ (13 ಅಡಿ) ಉದ್ದವನ್ನು ಹಾಗೂ 3೦೦ ಕಿ.ಗ್ರಾಂ ವರೆಗೆ ತೂಕವನ್ನು ಹೊಂದಬಹುದು. ದೊಡ್ಡ ದೇಹ ಮತ್ತು ಅಪಾರ ಬಲ ಹೊಂದಿರುವ ಹುಲಿಯ ಕಣ್ಸೆಳೆಯುವ ಲಕ್ಷಣವೆಂದರೆ ಬಿಳೀ ಅಥವಾ ಹಳದಿ ಯಾ ಕೇಸರಿ ಬಣ್ಣದ ಮೈ ಮೇಲೆ ನೀಳವಾಗಿ ಮೇಲಿನಿಂದ ಕೆಳಗೆ ಇರುವ ಗಾಢ ಬಣ್ಣದ ಪಟ್ಟೆಗಳು. ಸಾಮಾನ್ಯವಾಗಿ ಹುಲಿಯ ದೇಹದ ಅಡಿಯ ಭಾಗ ತೆಳು ಬಣ್ಣದ್ದಾಗಿರುತ್ತದೆ. ಹುಲಿಗಳ ಜಾತಿಗಳ ಪೈಕಿ ಸೈಬೀರಿಯಾದ ಹುಲಿ ಅತ್ಯಂತ ದೊಡ್ಡ ಕಾಯವನ್ನು ಹೊಂದಿರುತ್ತದೆ.

ವಿಶ್ವ ಹುಲಿ ದಿನಾಚರಣೆಯಾಗಿದ್ದು, ನಮ್ಮ ರಾಷ್ಟ್ರೀಯ ಪ್ರಾಣಿಯಾದ ಹುಲಿಗಳ ಸಂಖ್ಯೆ ಭಾರತದಲ್ಲಿ ಎರಡನೇ ಅತಿಹೆಚ್ಚು ಹುಲಿಗಳಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯ ಪಾತ್ರವಾಗಿದೆ.

Posted by VTV on Tuesday, 28 July 2020

ಹೌದು, 2014ರ ಹುಲಿಗಣತಿಯ ಪ್ರಕಾರ ಭಾರತದಲ್ಲಿ ಒಟ್ಟು 2,264 ಹುಲಿಗಳಿದ್ದು, ಕರ್ನಾಟಕದಲ್ಲಿಯೇ ಸುಮಾರು 229 ಹುಲಿಗಳು ಕಂಡುಬರುತ್ತವೆ.ವರದಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು ಹುಲಿಗಳಿದ್ದು, ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಭಾರತದಲ್ಲಿ ಸದ್ಯ ಒಟ್ಟು 2,967 ಹುಲಿಗಳಿವೆ.  ಈ ಮೂಲಕ ರಾಷ್ಟ್ರದಲ್ಲಿಯೇ ಎರಡನೇ ಅತಿಹೆಚ್ಚು ಹುಲಿಗಳಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ರಾಜ್ಯದ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳು ಹುಲಿ ಸಂರಕ್ಷಿತ ಅಭಯಾರಣ್ಯಗಳಾಗಿವೆ.

ಏನಿದು ಹುಲಿ ದಿನ?
ಹುಲಿ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಹುಲಿಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2010 ರ ಜುಲೈ 29ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್‍ನಲ್ಲಿ ಆಚರಿಸಲಾಯಿತು.
ಹುಲಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಮತ್ತು ಹುಲಿಗಳ ಸಂರಕ್ಷಣೆಯನ್ನು ಮಾಡಲು ಪ್ರತಿ ವರ್ಷದ ಜುಲೈ 29ನ್ನು ‘ವಿಶ್ವ ಹುಲಿ ದಿನ’ವನ್ನಾಗಿ ಆಚರಿಸಲಾಗುತ್ತದೆ. ಈ ಆಚರಣೆಯ ಹಿಂದಿನ ಪ್ರಮುಖ ಉದ್ದೇಶ ಅಪಾಯದಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸುವುದು.

- Advertisement -

Related news

error: Content is protected !!