Saturday, June 13, 2026
spot_imgspot_img
spot_imgspot_img

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ

- Advertisement -
- Advertisement -

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವರನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಸೆ ಅವಿನಾಶ್ ಎಚ್ ನೇತೃತ್ವದ ಪೊಲೀಸರು ಕಡಬ ತಾಲೂಕು ಸವಣೂರು ಗ್ರಾಮದ ನಿವಾಸಿಗಳಾದ ನವಾಝ್ ಮಾಂತೂರು (35) ಹಾಗೂ ಪ್ರಮೋದ್ ಎಂಬವರುಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನವಾಝ್ ಮಾಂತೂರ್ ಎಂಬಾತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!