


ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಪದಗ್ರಹಣ ಸಮಾರಂಭ (Investiture Ceremony)ವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ ನೂತನ ವಿದ್ಯಾರ್ಥಿ ನಾಯಕರು ಹಾಗೂ ಉಪನಾಯಕರಿಗೆ ಅಧಿಕೃತವಾಗಿ ಜವಾಬ್ದಾರಿಗಳನ್ನು ವಹಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿರಿ ಎಲ್ ಎನ್ ಕೂಡೂರು ವಿದ್ಯಾರ್ಥಿ ನಾಯಕರಿಗೆ ಬ್ಯಾಡ್ಜ್ ಹಾಗೂ ಪದಕಗಳನ್ನು ಧರಿಸಿ, ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನೂತನ ನಾಯಕರು ಶಾಲೆಯ ಶಿಸ್ತು, ಸೌಹಾರ್ದತೆ ಮತ್ತು ಉತ್ತಮ ವಾತಾವರಣವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಶಾಲೆಯ ಪ್ರಾಂಶುಪಾಲ ಶ್ರೀ ಜಯರಾಮ ರೈ ಮಾತನಾಡಿ, ಆದರ್ಶ ನಾಯಕತ್ವವು ಕೇವಲ ಹುದ್ದೆಯಲ್ಲ, ಬದಲಾಗಿ ಶಿಸ್ತು, ಪ್ರಾಮಾಣಿಕತೆ, ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವ ಅವಕಾಶವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿರ್ವಹಿಸಿ, ಇತರರಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ,ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಗುರುವಪ್ಪ ನಾಯ್ಕ ಸಂಯೋಜಿಸಿದರು. ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.








