Friday, April 26, 2024
spot_imgspot_img
spot_imgspot_img

IPL 2021: ಆರ್​ಆರ್​ ವಿರುದ್ದ ಮುಂಬೈ ಇಂಡಿಯನ್ಸ್​ಗೆ 8 ವಿಕೆಟ್ ಗಳ ಭರ್ಜರಿ ಜಯ

- Advertisement -G L Acharya panikkar
- Advertisement -
driving

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2021ರ 51ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ವಿರುದ್ದ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 90 ರನ್ ಕಲೆಹಾಕಿತು. ಈ ಸುಲಭ ಗುರಿ ಬೆನ್ನತ್ತಿದ ಮುಂಬೈ ಪರ ಇಶಾನ್ ಕಿಶನ್ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅಲ್ಲದೆ 8.2 ಓವರ್​ನಲ್ಲಿ 2 ವಿಕೆಟ್ ಕಳೆದುಕೊಂಡು ಮುಂಬೈ ಇಂಡಿಯನ್ಸ್ 94 ರನ್ ಬಾರಿಸುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಅವಕಾಶವನ್ನು ಜೀವಂತವಿರಿಸಿಕೊಂಡಿದೆ.

RR 90/9 (20)
MI 94/2 (8.2)

ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 13 ಬಾರಿ ಗೆಲುವು ದಾಖಲಿಸಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದು ಬೀಗಿದೆ.

- Advertisement -

Related news

error: Content is protected !!