Saturday, May 15, 2021
spot_imgspot_img
spot_imgspot_img

ಕೊರೊನಾ ಕಾಟ: ಐಪಿಎಲ್ ಕೂಟ ರದ್ದು

- Advertisement -
- Advertisement -

ಹೊಸದಿಲ್ಲಿ: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ರದ್ದು ಮಾಡಲಾಗಿದೆ ಎಂದಿದ್ದಾರೆ.

ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಬಾಲಾಜಿ, ಸಿಎಓ ವಿಶ್ವನಾಥನ್ ಮತ್ತು ಬಸ್ ಕ್ಲೀನರ್ ಗೆ ಕೋವಿಡ್ ಸೋಂಕು ದೃಢವಾಗಿತ್ತು.

ಇಂದು ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ದಿಮಾನ್ ಸಾಹಾ ಕೂಡಾ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ

ಕೆಕೆಆರ್ ತಂಡದ ಆಟಗಾರರಿಗೆ ಕೋವಿಡ್ ಸೋಂಕು ದೃಢವಾದ ಕಾರಣ ಸೋಮವಾರ ಆರ್ ಸಿಬಿ ವಿರುದ್ಧ ನಡೆಯಬೇಕಿದ್ದ ಪಂದ್ಯ ಮುಂದೂಡಲಾಗಿತ್ತು, ಚೆನ್ನೈ ಕ್ಯಾಂಪ್ ನಲ್ಲಿ ಸೋಂಕು ಕಂಡುಬAದ ಹಿನ್ನೆಲೆಯಲ್ಲಿ ಸಿಎಸ್ ಕೆ- ರಾಜಸ್ಥಾನ ನಡುವಿನ ಪಂದ್ಯವೂ ಮುಂದೂಡಲಾಗಿತ್ತು. ಆದರೆ ಇದೀಗ ಸಂಪೂರ್ಣ ಕೂಟವನ್ನೇ ರದ್ದು ಮಾಡಲಾಗಿದೆ.

driving
- Advertisement -
- Advertisement -

MOST POPULAR

HOT NEWS

Related news

error: Content is protected !!