Thursday, April 25, 2024
spot_imgspot_img
spot_imgspot_img

ಕೊನೆಗೂ ಪ್ರಕಟಗೊಂಡಿತು ಐಪಿಎಲ್ ವೇಳಾಪಟ್ಟಿ; ಮುಂಬೈ-ಚೆನ್ನೈ ಮೊದಲ ಪಂದ್ಯ.

- Advertisement -G L Acharya panikkar
- Advertisement -

ಬೆಂಗಳೂರು: ಐಪಿಎಲ್ 13ನೇ ಆವೃತ್ತಿಯ ವೇಳಾಪಟ್ಟಿ ಕೊನೆಗೂ ಭಾನುವಾರ ಬಿಡುಗಡೆಯಾಗಿದೆ. ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ  ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಟೂರ್ನಿಯಲ್ಲಿ ನವೆಂಬರ್ ಮೂರರವರೆಗೆ ಒಟ್ಟು 56 ಪಂದ್ಯಗಳು ನಡೆಯಲಿದ್ದು, 45 ದಿನಗಳ ಕಾಲ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ವಾರದ ದಿನದಲ್ಲಿ ಎಂದಿನಂತೆ ಕೇವಲ ಒಂದೇ ಪಂದ್ಯ ನಡೆಯುತ್ತದೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನೂ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳಿದ್ದು, ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 7.30ಕ್ಕೆ ಆರಂಭವಾಗಲಿದೆ.

ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಅಬುಧಾಬಿ ಸ್ಟೇಡಿಯಂನಲ್ಲಿ ನಡೆಯಲಿದೆ. ಕೊನೆಯ ಲೀಗ್ ಪಂದ್ಯ ಶಾರ್ಜಾ ಮೈದಾನದಲ್ಲಿ ನಡೆಯಲಿದೆ. ವಿರಾಟ್​ ಕೊಹ್ಲಿ ಸಾರಥ್ಯದ ಆರ್​​ಸಿಬಿ ತಂಡ ಸೆಪ್ಟೆಂಬರ್​ 21ರಂದು ಸನ್​ರೈಸರ್ಸ್ ತಂಡದ ವಿರುದ್ಧ ದುಬೈನಲ್ಲಿ ಆಡುವ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ.

ಸೆಪ್ಟೆಂಬರ್​ 20ರಂದು ಟೂರ್ನಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡಗಳು ಸೆಣಸಲಿವೆ.ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದ್ದು, ನಂತರ ನಡೆಯುವ ಕ್ವಾಲಿಫಯರ್, ಫೈನಲ್ ಪಂದ್ಯದ ಸ್ಥಳಗಳ ಮಾಹಿತಿಯನ್ನು ಪ್ರಕಟಿಸಿಲ್ಲ.

- Advertisement -

Related news

error: Content is protected !!