Friday, April 19, 2024
spot_imgspot_img
spot_imgspot_img

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ

- Advertisement -G L Acharya panikkar
- Advertisement -

ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ , ಅಣ್ಣಾಮಲೈ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಅಣ್ಣಾಮಲೈ, ಕರ್ನಾಟಕ ಜನತೆಗೆ ಋಣಿಯಾಗಿರುತ್ತೇನೆ.
ಪ್ರಧಾನಮಂತ್ರಿ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಕೈ ಗಟ್ಟಿ ಮಾಡಬೇಕು. ನಾನು ಬಿಜೆಪಿ ಸೇರಲು 1 ವರ್ಷದಿಂದ ಕಾಯುತ್ತಿದ್ದೆ.


ತಮಿಳುನಾಡು ರಾಜಕೀಯದಲ್ಲಿ ಬದಲಾವಣೆ ಆಗಬೇಕು. ತಮಿಳುನಾಡಿನಲ್ಲಿ ಉತ್ತಮ ಕೆಲಸ ಮಾಡುತ್ತೇನೆ ಎಂದರು.

- Advertisement -

Related news

error: Content is protected !!