- Advertisement -
- Advertisement -
ಬೆಂಗಳೂರು: ಗೃಹ ಇಲಾಖೆ ಕಾರ್ಯದರ್ಶಿಯಾಗಿ ಐಪಿಎಸ್ ಅಧಿಕಾರಿ ಡಿ.ರೂಪಾ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದಗೆ ಮಹಿಳಾ ಅಧಿಕಾರಿಗಳು ನೇಮಕವಾಗಿರಲಿಲ್ಲ. ಹೀಗಾಗಿ ಗೃಹ ಇಲಾಖೆಯ ಮೊದಲ ಮಹಿಳಾ ಕಾರ್ಯದರ್ಶಿ ಎಂಬ ಹೆಗ್ಗಳಿಕೆಗೆ ಡಿ.ರೂಪಾ ಪಾತ್ರರಾಗಿದ್ದಾರೆ.
ಮೊನ್ನೆಯಷ್ಟೇ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರೈಲ್ವೇ ಇಲಾಖೆಯ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಿ.ರೂಪ ಅವರನ್ನು ಗೃಹ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು.
- Advertisement -