Sunday, June 29, 2025
spot_imgspot_img
spot_imgspot_img

ಐಪಿಎಸ್ ರೂಪಾ ಐಎಎಸ್ ರೋಹಿಣಿ ಪ್ರಕರಣ; ಸಿಂಧೂರಿಗೆ ತಾತ್ಕಾಲಿಕ ರಿಲೀಫ್..!

- Advertisement -
- Advertisement -

ಬೆಂಗಳೂರು: ಐಪಿಎಸ್ ಅಧಿಕಾರಿ​ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್​ ರಿಲೀಫ್ ನೀಡಿದೆ.

ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ. ಮಾರ್ಚ್​ 12 ರವರೆಗೆ ವಿಚಾರಣೆ ಮುಂದೂಡಿದ್ದಾರೆ.ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ‌ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು.

2023ರ ಫೆ.19 ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆಯಾಗಿದೆ. 6 ತಿಂಗಳ ವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ ನನ್ನ ತಂಗಿ, ಪತಿ, ಮಕ್ಕಳೂ ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ರೋಹಿಣಿ ವಿರುದ್ಧ ರೂಪಾ ಮಾನನಷ್ಟ ಮೊಕದ್ದಮೆ ಹೂಡಿದ್ದರು.

- Advertisement -

Related news

error: Content is protected !!