Friday, June 5, 2026
spot_imgspot_img
spot_imgspot_img

ಇಸ್ರೇಲ್ ಪರ ಬೇಹುಗಾರಿಕೆ; ಮೂವರನ್ನು ಗಲ್ಲಿಗೇರಿಸಿದ ಇರಾನ್

- Advertisement -
- Advertisement -

ಟೆಹ್ರಾನ್: ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್ ತಿಳಿಸಿದೆ.

ಗಲ್ಲಿಗೇರಿಸಲಾದ ಮೂವರು ವ್ಯಕ್ತಿಗಳನ್ನು ಇದ್ರಿಸ್ ಅಲಿ, ಆಜಾದ್ ಶೋಜೈ ಮತ್ತು ರಸೂಲ್ ಅಹ್ಮದ್ ರಸೂಲ್ ಎಂದು ಗುರುತಿಸಲಾಗಿದೆ.

ಈ ಮೂವರು ಶಸ್ತ್ರಾಸ್ತ್ರಗಳನ್ನು ಇರಾನ್‌ಗೆ ತರಲು ಯತ್ನಿಸಿದ್ದರು. ಈ ಮೂಲಕ ಇಸ್ರೇಲ್‌ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ.

ಶಿಕ್ಷೆಗೆ ಗುರಿಯಾದ ಮೂವರು ನೀಲಿ ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್‌ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ ಸಮಯದಲ್ಲಿ, ಇಸ್ರೇಲ್ ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಕನಿಷ್ಠ 700 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್ ಜೊತೆ ಸಂಪರ್ಕದಲ್ಲಿದ್ದ ಗೂಢಚಾರಿಯನ್ನು ಸಹ ಗಲ್ಲಿಗೇರಿಸಲಾಗಿದೆ. ಸುಪ್ರೀಂ ಕೋರ್ಟ್ ಸಂಪೂರ್ಣ ವಿಚಾರಣೆ ನಡೆಸಿ ಅಪರಾಧಿಗೆ ಈ ಶಿಕ್ಷೆ ವಿಧಿಸಿದೆ. ಗಲ್ಲಿಗೇರಿಸಲಾದ ಗೂಢಚಾರಿಯನ್ನು ಮಜೀದ್ ಮೊಸಾಯೆಬಿ ಎಂದು ಗುರುತಿಸಲಾಗಿದೆ. ಈತ ಮೊಸಾದ್‌ಗೆ ಇರಾನ್‌ನ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ ಎಂದು ನ್ಯಾಯಾಂಗದ ಮಿಜಾನ್ ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

- Advertisement -

Related news

error: Content is protected !!