- Advertisement -
- Advertisement -







ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಪಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಸಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
- Advertisement -








